ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾನು ಕರಸೇವಕ ನನ್ನನ್ನೂ ಬಂಧಿಸಿ: ಪೊಲೀಸ್ ಠಾಣೆ ಎದುರು ಸಿ.ಟಿ ರವಿ ಧರಣಿ

11:39 AM Jan 04, 2024 IST | Samyukta Karnataka

ಚಿಕ್ಕಮಗಳೂರು: ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂದು ಮಾಜಿ ಶಾಸಕ ಸಿ.ಟಿ ರವಿ ನಗರ ಪೊಲೀಸ್‌ ಠಾಣೆ ಎದುರು ಗುರುವಾರ ಬೆಳಗ್ಗೆ ಧರಣಿ ನಡೆಸಿದರು.
ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಸಿ.ಟಿ.ರವಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ, ಬಿಜೆಪಿ ಕಾರ್ಯಕರ್ತರು ಹಲವು ಮುಖಂಡರು ಠಾಣೆ ಮುಂದೆ ಜಮಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಪೊಲೀಸ್‌ ಠಾಣೆ ಒಳಗೆ ಸಿ.ಟಿ ರವಿಯವರನ್ನು ಕರೆದುಕೊಂಡು ಹೋದರು. ಈ ವೇಳೆ ಕೆಂಡಾಮಂಡಲರಾದ ಬಿಜೆಪಿ ಕಾರ್ಯಕರ್ತರು ನಾವು ಕರಸೇವಕರೆ ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರು ನಡುವೆ ಮಾತಿನ ಚಕಮಕಿ ತಳ್ಳಾಟ ನೂಕಾಟ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಮತ್ತಷ್ಟು ಕೂಗಲಾರಂಭಿಸಿದರು. ಕೆಲಕಾಲ ನಗರ ಪೊಲೀಸ್ ಠಾಣೆ ಎದುರು ಹೈಡ್ರಾಮವೇ ನಡೆಯುತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆ ಆವರಣದಿಂದ ಹೊರಗೆ ಕಳುಹಿಸಿದರು.

Next Article