ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾನು ಯಾರಿಗೂ ಮಾತುಕೊಟ್ಟಿಲ್ಲ‌, ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ

07:33 PM Oct 21, 2024 IST | Samyukta Karnataka

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತುಕೊಟ್ಟು ತಪ್ಪಿದ್ದಾರೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾರಿಗೂ ಟಿಕೆಟ್ ಕೊಡಿಸುತ್ತೇನೆ ಎಂದು ಮಾತುಕೊಟ್ಟಿಲ್ಲ. ಸುಮಾರು 50 ಜನ ಆಕಾಂಕ್ಷಿಗಳು ಇದ್ದರು, ಎಲ್ಲರಿಗೂ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರಬೇಕು ಅಂತಾ ಒಂದೇ ಮಾತು ಹೇಳಿದ್ದೆ. ಇದು ನನ್ನ ನಿರ್ಣಯ ಅಲ್ಲಾ,‌ ಪಕ್ಷದ ನಿರ್ಣಯ. ನಾನು ಯಾರಿಗೂ ಮಾತುಕೊಟ್ಟಿಲ್ಲ.‌ ಮಾತು ತಪ್ಪಿಲ್ಲ ಎಂದು ಹೇಳಿದರು.
ನನ್ನ ಮಗನನ್ನು ನಿಲ್ಲಿಸಲು ಆಸಕ್ತಿ ಇರಲಿಲ್ಲ. ಕೊನೆಯ ಘಳಿಗೆವರಿಗೂ ಬೇಡ ಅಂತಾ ಹೇಳಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಟಿಕೆಟ್ ನೀಡಿದೆ. ಗೆಲ್ಲುವ ದೃಷ್ಟಿಯಿಂದ ಟಿಕೆಟ್ ನೀಡಿದೆ. ತಿರ್ಮಾನ ಮಾಡಿದೆ. ಪಕ್ಷದ ಆದೇಶವನ್ನು ಪರಿಪಾಲನೆ ಮಾಡುವುದು ನನ್ನ ಕಾರ್ಯ. ಕೇಂದ್ರ ಗೃಹ ಸಚಿವ ಅಮಿಶ್ ಶಾ ಮಾತನಾಡಿ ಟಿಕೆಟ್ ಫೈನಲ್ ಮಾಡಿದ್ದಾರೆ ಎಂದರು.
ಸಾಮಾನ್ಯ ಕಾರ್ಯಕರ್ತರಿಗೆ ಅನ್ಯಾಯ ಆಗಿದೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ. ಅವರಿಗೆ ಕ್ಯಾಬಿನೆಟ್ ಸ್ಥಾನ ನೀಡಿದ್ದೇನೆ. ಹಲವಾರು ಸ್ಥಾನಮಾನ ಮಾಡಿದ್ದೇವೆ. ಶ್ರೀಕಾಂತ್ ದುಂಡಿಗೌಡರ ಜೊತೆ ಮಾತನಾಡುತ್ತೇನೆ. ಮನವೊಲಿಸಲು ಕಾರ್ಯ ಮಾಡುತ್ತೇವೆ ಎಂದು ಹೇಳಿದರು.
ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ ಯೋಗೇಶ್ವರ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವತ್ತಿನ ಬೆಳವಣಿಗೆ ಗೊತ್ತಿಲ್ಲ. ನಿನ್ನೆ‌ ತಡರಾತ್ರಿ ಮನವೊಲಿಸಲು ಪ್ರಯತ್ನ ನಡೆದಿತ್ತು. ರಾಷ್ಟ್ರೀಯ ವರಿಷ್ಠರು ಮಾತುಕತೆ ಮಾಡಿ ಮನವೊಲಿಸಲು ಕಾರ್ಯ ಮಾಡುತ್ತಾರೆ. ಸರಿಯಾಗುತ್ತದೆ ಅನ್ನುವ ವಿಶ್ವಾಸ ಇದೆ. ಸಿ.ಪಿ ಯೋಗೇಶ್ವರಗೆ ಸ್ವರ್ಧೆ ಮಾಡುವ ಆಸೆ ಇದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕ್ಷೇತ್ರ ಆಗಿದ್ದು, ಅವರಿಬ್ಬರೂ ಮಾತುಕತೆ ಮಾಡಿಕೊಂಡು ಹೊಂದಾಣಿಕೆ ಆಗಬೇಕಿತ್ತು. ತಡವಾಗಿದ್ದಕ್ಕೆ ಈ ನಿರ್ಧಾರಕ್ಕೆ ಬಂದಿರಬಹುದು. ನಮ್ಮ ಪಕ್ಷದ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಸರಿಪಡಿಸುವ ಕಾರ್ಯ ಮಾಡುತ್ತದೆ. ಸಿ.ಪಿ‌. ಯೋಗೇಶ್ವರ ಕಾಂಗ್ರೆಸ್ ಮುಖಂಡರ ಜೊತೆ ಸಂಪರ್ಕದಲ್ಲಿರುವ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

Tags :
basavaraj bommaielectionhaveri
Next Article