ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಮಕಾವಸ್ತೆ ಅಧ್ಯಕ್ಷಗಿರಿ ಇಟ್ಟುಕೊಂಡು ಏನು ಮಾಡುತ್ತೀರಿ?

10:14 AM Sep 28, 2024 IST | Samyukta Karnataka

'ಮನೇಲಿ ಇಲಿ ಬೀದೀಲಿ ಹುಲಿ' ಎಂಬಂತೆ ನಿಮ್ಮ ಪೌರುಷ, ಅಬ್ಬರ ಮಾಧ್ಯಮಗಳ ಮುಂದೆ ಮಾತ್ರಾನಾ?

ಬೆಂಗಳೂರು: ಡೋಂಗಿರಾಮಯ್ಯನ ಇಡೀ ಜೀವನವೇ ಒಂದು ದೊಡ್ಡ ಡೋಂಗಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯವಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬುರುಡೆ ರಾಮಯ್ಯನ ಬದುಕೆಲ್ಲ ಬರೀ ಬುರುಡೆಯೇ. ಕಾಲಕ್ಕೆ ತಕ್ಕಂತೆ ತಮ್ಮ ಮೂಗಿನ ನೇರಕ್ಕೆ ಬಣ್ಣ ಬದಲಾಯಿಸುವ ಊಸರವಳ್ಳಿ ರಾಮಯ್ಯನ ಬೂಟಾಟಿಕೆ ಬಗ್ಗೆ ದೊಡ್ಡ ಪುಸ್ತಕವೇ ಬರೆಯಬಹುದು.
2011ರಲ್ಲಿ ರಾಜ್ಯಪಾಲರ ಅಧಿಕಾರದ ಬಗ್ಗೆ ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ಅವರು ನುಡಿದಿರುವ ನುಡಿಮುತ್ತುಗಳನ್ನು ಒಮ್ಮೆ ಕೇಳಿಸಿಕೊಳ್ಳಿ ಡಿಸಿಎಂ ಡಿ ಕೆ ಶಿವಕುಮಾರ ಅವರೇ…. ಎರಡೆರಡು ನ್ಯಾಯಾಲಯಗಳು ಛೀಮಾರಿ ಹಾಕಿ, ಲೋಕಾಯುಕ್ತ ಪೊಲೀಸರು ಎಫ್ಐಆರ್ ಹಾಕಿದ್ದರೂ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಾಗದಂತಹ ನಿಮ್ಮಂತಹ ದುರ್ಬಲ ಕೆಪಿಸಿಸಿ ಅಧ್ಯಕ್ಷರು ಬಹುಶಃ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಇರಲಿಲ್ಲ. ಇಂತಹ ನಾಮಕಾವಸ್ತೆ ಅಧ್ಯಕ್ಷಗಿರಿ ಇಟ್ಟುಕೊಂಡು ಏನು ಮಾಡುತ್ತೀರಿ? 'ಮನೇಲಿ ಇಲಿ ಬೀದೀಲಿ ಹುಲಿ' ಎಂಬಂತೆ ನಿಮ್ಮ ಪೌರುಷ, ಅಬ್ಬರ ಮಾಧ್ಯಮಗಳ ಮುಂದೆ ಮಾತ್ರಾನಾ? ಅಥವಾ ಸಿದ್ದರಾಮಯ್ಯರನ್ನ ಇಳಿಸಿದರೆ ಅವರು ಕಾಂಗ್ರೆಸ್ ಪಕ್ಷವನ್ನೇ ಮುಳುಗಿಸಿ ಬಿಡುತ್ತಾರೆ ಎಂಬ ಭಯವೋ? ಎಂದು ಪ್ರಶ್ನಿಸಿದ್ದಾರೆ.

Tags :
#Bengaluru#cmsiddaramaiah#DKShivakumar#Rashoka#ಸಿದ್ದರಾಮಯ್ಯ
Next Article