ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಮಫಲಕದಲ್ಲಿ ಕನ್ನಡವಿರಲೇಬೇಕು

03:17 PM Dec 28, 2023 IST | Samyukta Karnataka

ಬೆಂಗಳೂರು: ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ನಾಮಫಲಕ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಬೆಂಗಳೂರಿನ ವಾಣಿಜ್ಯ ಮಳಿಗೆಗಳು ಕನ್ನಡ ನಾಮಫಲಕ ಹಾಕಬೇಕೆನ್ನುವ ಕನ್ನಡಪರ ಸಂಘಟನೆಗಳ ಬೇಡಿಕೆ ಸರಿಯಿದೆ. ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಗಳಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು. ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ಭಾಷೆಯ ಬಗ್ಗೆ ನನಗಾಗಲೀ, ನಮ್ಮ ಸರ್ಕಾರಕ್ಕಾಗಲೀ ವಿರೋಧವಿಲ್ಲ. ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು. ಇದು ನಮ್ಮ ನೆಲದ ನಿಯಮ. ಎಲ್ಲರೂ ಇದನ್ನು ಪಾಲಿಸಬೇಕು." ಎಂದಿದ್ದಾರೆ.

Next Article