ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಯಕರ ಕಿತ್ತಾಟದಿಂದ ಬಿಜೆಪಿ ಹೆಚ್ಚು ಸೀಟು ಗೆಲ್ಲಲ್ಲ

08:58 PM Mar 11, 2024 IST | Samyukta Karnataka

ಮುಂಡಗೋಡ: ರಾಜ್ಯ ಬಿಜೆಪಿ ನಾಯಕರ ಕಿತ್ತಾಟದಿಂದ ಅವರು ಹೆಚ್ಚು ಕ್ಷೇತ್ರಗಳನ್ನು ಈ ಬಾರಿ ಗೆಲ್ಲುವುದಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ೪ ಕೋಟಿ ರೂ. ವೆಚ್ಚದಲ್ಲಿ ನೂತನವಾಗ ನಿರ್ಮಾಣವಾಗಿರುವ ಬಸ್ ಡಿಪೋ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯವರು ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಈಗ ಲೋಕಸಭಾ ಚುನಾವಣೆಯಲ್ಲೂ ಅದನ್ನೇ ಹೇಳುತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ೨೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ನಿಶ್ಚಿತ ಎಂದರು.
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳನ್ನು ನೋಡಿ ವಿಪಕ್ಷಗಳಿಗೆ ಸಹಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೆ ಹುರುಳಿಲ್ಲ ಎಂದರು.

Next Article