ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್‌ಗೂ ಎಚ್ಚರಿಕೆ ಗಂಟೆ

03:30 PM Dec 03, 2023 IST | Samyukta Karnataka

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್‌ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆಗಿಂತ ಮೊದಲು ಬಂದಿರುವುದರಿಂದ ಇದನ್ನು ಸೆಮಿಫೈನಲ್ ಅಂತ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಂತೂ ಮೇಲಿಂದ‌ ಮೇಲೆ ಹೇಳಿದ್ದಾರೆ. ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದರು.
ಮಧ್ಯಪ್ರದೇಶ ಮೂರನೇ ಎರಡರಷ್ಟು ಬಹುಮತ ಪಡೆದಿದ್ದೇವೆ. ಛತ್ತಿಸ್‌ಘಡ, ರಾಜಸ್ತಾನದಲ್ಲೂ ಸ್ಪಷ್ಟ ಬಹುಮತ ಪಡೆದಿದ್ದೇವೆ. ತೆಲಂಗಾಣದಲ್ಲಿ ನಮ್ಮ ಸಂಖ್ಯೆ 1ರಿಂದ 11ಕ್ಕೆ ಏರಿದ್ದೇವೆ. ಈ‌ ಫಲಿತಾಂಶಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾನ್ ಸೇರಿದಂತೆ ಎಲ್ಲ ನಾಯಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಧಾನಿ ಮೋದಿ ಅವರನ್ನು ಟಾರ್ಗೆಟ್ ಮಾಡಿದರು. ಜಾತಿ ರಾಜಕಾರಣ, ಸನಾತನ ಧರ್ಮದ ವಿರುದ್ಧ ಅಪ ಪ್ರಚಾರ ಮಾಡಿದ್ದಾರೆ. ಗ್ಯಾರೆಂಟಿಗಳನ್ನು ಆಪ್ ಆರಂಭ ಮಾಡಿತ್ತು. ಅದನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಮುಂದುವರೆಸಿತು. ಸುಳ್ಳು ಹೇಳಿ ಜನರ ವಿಶ್ವಾಸಗಳಿಸುವ ಪ್ರಯತ್ನ ಮಾಡಿದರು. ಗ್ಯಾರೆಂಟಿಗಳನ್ನು ಜನ ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದರು.
ಇಂಡಿಯಾ ಒಕ್ಕೂಟದ ಪರಿಸ್ಥಿತಿ ಈಗ ನಡೆದ ಚುನಾವಣೆಗಳನಲ್ಲಿ ಛಿದ್ರವಾಗಿದೆ. ಕಾಂಗ್ರೆಸ್ ಅದರಿಂದ ದೂರವಾಗುತ್ತಿದೆ. ಲೊಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸಂಪೂರ್ಣ ನೆಲ ಕಚ್ಚಲಿದೆ ಎಂದು ಹೇಳಿದರು.
ಇನ್ನು ಈ ಫಲಿತಾಂಶ ಕರ್ನಾಟಕದ ಮೇಲೂ ಆಗಲಿದ್ದು, ಕರ್ನಾಟಕದಲ್ಲಿ ಇಷ್ಟೊಂದು ಬರ ಇದೆ.‌ ಡಿಸಿ ಅಕೌಂಟ್‌ನಲ್ಲಿ 400 ಕೋಟಿಗೂ ಅಧಿಕ ರೂ. ಹಣ ಇದ್ದರೂ, ಅದನ್ನು ಬಿಡುಗಡೆ ಮಾಡದೇ ಕೇಂದ್ರದ ಕಡೆಗೆ ಬೆರಳು ಮಾಡುತ್ತಿದ್ದಾರೆ‌. ಹಿಂದಿನ ಯಾವುದೇ ಸರ್ಕಾರ ಈ ರೀತಿ ಮಾಡಿಲ್ಲ.‌ ಮೊದಲು ತನ್ನ ಬಳಿ ಇರುವ ಹಣವನ್ನು ರೈತರಿಗೆ ಪರಿಹಾರ ನೀಡಬೇಕು. ನಾವು ಪ್ರವಾಹ ಬಂದಾಗ ಮೊದಲು ಪರಹಾರ ನೀಡಿದ್ದೇವು.
ಅತಿ ಹೆಚ್ಷು ಭ್ರಷ್ಟಾಚಾರ ಇರುವ ರಾಜ್ಯ ಕರ್ನಾಟಕ, ಪಿಎಸ್ಬೈ ಹಗರಣದ ಕುರಿತು ನಾವು ಚಾರ್ಜ್ ಸೀಟ್ ಸಲ್ಲಿಸಿದ್ದರೂ ಮತ್ತೆ ಆಯೋಗ ಮಾಡಿದ್ದಾರೆ ಎಂದರು.
ಅಧಿವೇಶನದ ನಂತರ‌ ಜನಾಂದೋಲನ
ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಕೇವಲ 25% ರಷ್ಟು ಜನರಿಗೆ ಮಾತ್ರ ತಲುಪಿದೆ. ಅಧಿವೇಶನ ಮುಗಿದ ಮೇಲೆ ಬಿಜೆಪಿಯಿಂದ ಗ್ಯಾರೆಂಟಿಗಾಗಿ ಸರಿಯಾದ ಅನುಷ್ಠಾನಕ್ಕಾಗಿ ಬೃಹತ್ ಚಳುವಳಿ ನಡೆಸಲು ತೀರ್ಮಾನ ಮಾಡಿದ್ದೆವೆ. ಗ್ಯಾರೆಂಟಿ ದೊರೆಯದ ಫಲಾನುಭವಿಗಳ ಮುಂದಾಳತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.
ಮೋದಿ ವರ್ಚಸ್ಸು ಹೆಚ್ಚಾಗಿದೆ
ದೇಶದಲ್ಲಿ ಈಗಿನ ವಾತಾವರಣ ನೋಡಿದರೆ, ಮತ್ತೆ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗುತ್ತಾರೆ. ರಾಜ್ಯದಲ್ಲಿ 25 ಎಂಪಿ ಸ್ಥಾನ ಗೆಲ್ಲುತ್ತೇವೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ನಮಗೆ ಹೆಚ್ಚು ಅನುಕೂಲವಾಗಲಿದೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಗೆದ್ದರೆ ಇಡಿ ದೇಶ ಗೆದ್ದಂತೆ ಅಂತ ಹೇಳುತ್ತಾರೆ. ಪ್ರಧಾನಿ ಮೊದಿಯವರ ವರ್ಚಸ್ಸು ಈಗ ಮತ್ತೆ ಹೆಚ್ಚಾಗಿದೆ. ಕಾಂಗ್ರೆಸ್‌ನ ಯಾವ ನಾಯಕರಿಗೂ ಮೋದಿಯವರ ಶೇ 1% ರಷ್ಟೂ ವರ್ಚಸ್ಸಿಲ್ಲ.
ಮೋದಿಯವರು ಪ್ರಧಾನಿ ಎನ್ನುವ ಅಹಂ ಬಿಟ್ಟು ಹೋರಾಟ ಮಾಡುತ್ತಾರೆ ಈ ಸ್ವಭಾವ ಯಾವ ನಾಯಕರಿಗೂ‌ ಇರಲಿಲ್ಲ. ಈ ಫಲಿತಾಂಶ ಕರ್ನಾಟಕದ ಕಾಂಗ್ರೆಸ್‌ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.

Next Article