ನಾಳೆ ನಾಲ್ಕನೇ ಹಂತದ ಮತದಾನ
05:16 PM May 12, 2024 IST | Samyukta Karnataka
ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನವು ನಾಳೆ ಸೋಮವಾರ ನಡೆಯಲಿದೆ. 9 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ನಾಳೆಯೇ ಆಂಧ್ರಪ್ರದೇಶದ 175 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ ಈಗಾಗಲೇ ೩ ಹಂತದ ಲೋಕಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಏ. 19 ರಂದು ಮೊದಲ ಹಂತ ಹಾಗೂ ಏ. 26 2ನೇ ಹಂತ, ಮೇ 7 ರಂದು 3ನೇ ಹಂತದ ಚುನಾವಣೆಗಳು ಪೂರ್ಣಗೊಂಡಿದ್ದು, ನಾಳೆ 4ನೇ ಹಂತದ ಮತದಾನ ನಡೆಯಲಿದ್ದು, ಮೇ 20 ಕ್ಕೆ 5ನೇ ಹಾಗೂ ಮೇ 25 ಕ್ಕೆ 6ನೇ ಮತ್ತು ಜೂ. 1 ರಂದು 7ನೇ ಹಾಗೂ ಅಂತಿಮ ಹಂತದ ಚುನಾವಣೆಗಳು ನಡೆಯಲಿವೆ. ಜೂ. 4 ರಂದು ಎಲ್ಲ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.