ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಳೆ ರಜೆ ಘೋಷಣೆ

09:59 PM Apr 29, 2024 IST | Samyukta Karnataka

ಮೈಸೂರು: ದಿವಂಗತ ಶ್ರೀನಿವಾಸ್ ಪ್ರಸಾದ್‌ರವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್‌ರವರ ಪಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
೧೫ ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ರಾಜಕೀಯದಲ್ಲಿ ಸಂತೋಷದ ಕ್ಷಣ ಬಹಳ ಕಡಿಮೆ. ಹೋರಾಟ ಮಾಡುವಾಗ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದೆ ಎಂದು ಹೇಳಿರಬಹುದು ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜೊತೆಯಲ್ಲಿಯೇ ರಾಜಕಾರಣ ಮಾಡಿದವರು, ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಜನತಾ ಪಕ್ಷ ಹಾಗೂ ಕಾಂಗ್ರೆಸ್‌ನಲ್ಲಿ ಒಟ್ಟಿಗಿದ್ದವರನ್ನು ಕಳೆದುಕೊಂಡಾಗ ಬಹಳ ದುಃಖವಾಗುತ್ತದೆ ಎಂದರು.

Next Article