ನಾಳೆ ರಾಜ್ಯದಲ್ಲಿ ರಜೆ ಇಲ್ಲ
04:54 PM Jan 21, 2024 IST | Samyukta Karnataka
ತಮಕೂರು: ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಾಳೆ ನಡೆಯಲಿದ್ದು, ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಜೆ ಘೋಷಿಸಬೇಕೆಂದು ಬಿಜೆಪಿ ಹಾಗೂ ಕೆಲ ಸಂಘಟನೆಗಳು ಆಗ್ರಹಿಸಿದ್ದವು ಆದರೆ, ಸಿಎಂ ರಜೆ ಘೋಷಣೆ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ ಎಂದು ಅವರು ತಿಳಿಸಿದರು.