For the best experience, open
https://m.samyuktakarnataka.in
on your mobile browser.

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ: ಓರ್ವ ಸಾವು, 10ಜನ ಗಂಭೀರ

11:04 AM Jun 27, 2024 IST | Samyukta Karnataka
ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ  ಓರ್ವ ಸಾವು  10ಜನ ಗಂಭೀರ

ವಿಜಯನಗರ: ನಿಂತಿದ್ದ ಲಾರಿಗೆ ಟಿಟಿ ವ್ಯಾನ್ ಡಿಕ್ಕಿಯಾದ ಪರಿಣಾಮ ಒಬ್ಬ ಸಾವಿಗೀಡಾಗಿ 10 ಜನರಿಗೆ ಗಾಯಗಳಾಗಿವೆ. ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದ ಬಳಿ ನಡೆದಿರುವ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಕೃಷ್ಣಪ್ಪ(62) ಎಂಬವರು. ಗಾಯಗೊಂಡ 10 ಜನಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಟಿಟಿಯಲ್ಲಿದ್ದ ಇವರು ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿ ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿ 16 ಜನ ಪ್ರಯಾಣಿಸುತ್ತಿದ್ದರು.