ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ...

11:14 AM Sep 16, 2024 IST | Samyukta Karnataka

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕರ್ನಾಟಕ ಕಾಂಗ್ರೆಸ್‌ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ ಏಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಮಾನ್ಯ ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ. ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದಿದ್ದಾರೆ.

Tags :
#Congress#JDS#SaveDemocracy#ಕುಮಾರಸ್ವಾಮಿ#ಮಾನವಸರಪಳಿ#ಸಿದ್ದರಾಮಯ್ಯ
Next Article