ನಿರ್ಮಲಾ ಸೀತಾರಾಮನ್, ನಡ್ಡಾ, ಕಟೀಲ್ ವಿರುದ್ಧದ ಎಫ್‌ಐಆರ್ ರದ್ದು
03:28 PM Dec 03, 2024 IST
|
Samyukta Karnataka
ಬೆಂಗಳೂರು: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿದ್ದಾರೆಂದು ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಜೆಪಿ ನಡ್ಡಾ, ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನ್ನು ಹೈಕೋರ್ಟ್ ರದ್ದು ಮಾಡಿದೆ.
ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಜೆ ಪಿ ನಡ್ಡಾ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ 4ನೇ ಆರೋಪಿಯಾದ ಮಾಜಿ ಸಂಸದ ಹಾಗೂ ಬಿಜೆಪಿಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ಪ್ರಕಟಿಸಿದೆ.
Next Article