ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

10:25 AM Oct 23, 2024 IST | Samyukta Karnataka

ಬೆಂಗಳೂರು: ನಿನ್ನೆ ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಯಾಗಿದೆ.
ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ. 60-40 ಸೈಟ್‌ ಅಳತೆಯಲ್ಲಿ 6 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಿಸಲಾಗ್ತಿತ್ತು. ನಿರ್ಮಾಣಹಂತದ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ 21ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದ್ರೆ ಭಾರಿ ಮಳೆ ಹೊಡೆತಕ್ಕೆ, ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ ಒಟ್ಟು ಐವರ ಶವ ಪತ್ತೆಯಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳು ಸತತ 17 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ಈವರೆಗೂ ಹದಿಮೂರು ಜನರನ್ನು ರಕ್ಷಿಸಲಾಗಿದೆ. ಮೃತರನ್ನು ಅರ್ಮಾನ್, ತ್ರಿಪಾಲಿ, ಮೊಹಮ್ಮದ್ ದಾಹಿಲ್, ಶಂಕರ್ , ಸತ್ಯರಾಜ್ ಎಂದು ಗುರುತಿಸಲಾಗಿದೆ.

ಆಂಧ್ರ ಮೂಲದ ಮುನಿರಾಜು ರೆಡ್ಡಿ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದ್ದು, ಮುನಿರಾಜು ರೆಡ್ಡಿ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Tags :
#babusapalyabuildingcollapse#Bangalore#BengaluruIncident#DKShivakumar#ಅವಾಂತರ#ಮಳೆ
Next Article