ನಿರ್ಮಾಣ ಹಂತದ ಜಿಲ್ಲಾಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
10:59 PM Dec 03, 2024 IST
|
Samyukta Karnataka
ಉಡುಪಿ: ನಿರ್ಮಾಣ ಹಂತದಲ್ಲಿರುವ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮೂಡುಬೆಳ್ಳೆ ಗ್ರಾಮದ ಸಂತೋಷ್ (46) ಎಂದು ಗುರುತಿಸಲಾಗಿದೆ.
ಅವರು ನಿರ್ಮಾಣ ಹಂತದಲ್ಲಿರುವ ಸರಕಾರಿ ಆಸ್ಪತ್ರೆಗೆ ವಾಟರ್ ಪ್ರೂಫಿಂಗ್ ಕೆಲಸಕ್ಕೆ ಹೋಗಿದ್ದು, ಕಟ್ಟಡದ 6ನೇ ಅಂತಸ್ಥಿನ ಮೇಲಿರುವ ಟ್ಯಾಂಕಿಗೆ ವಾಟರ್ ಪ್ರೂಫಿಂಗ್ ಮಾಡಲು ತೆರಳಿದ್ದರು.
ಕೆಲಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ 6ನೇ ಅಂತಸ್ಥಿನಲ್ಲಿ ಅಳವಡಿಸಿರುವ ಪಾಲಿಕಾರ್ಮರ್ ಶೀಟ್‌ನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Article