ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಕಟ್ಟಡ ಕುಸಿತ

12:59 PM Dec 25, 2022 IST | Samyukta Karnataka

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡದ ಸ್ಲ್ಯಾಬ್​ ಕುಸಿದು ಬಿದ್ದು, 9ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಶನಿವಾರ ರಾತ್ರಿ ಕಾರ್ಮಿಕರು ಕೆಲಸ ಮಾಡುವಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಾಳು ಕಾರ್ಮಿಕರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾವತ್ ಕಾರ್ಮಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಸ್ಟೀಲ್ ಪ್ರೇಂ ಅಳವಡಿಸಿ ಸಿಮೆಂಟ್ ಹಾಕುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ಡಾ ಸುಧಾಕರ ಬೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಘಟನಾ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂಬತ್ತು ಜನ ಕಾರ್ಮಿಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗಾಯಾಳುಗಳ ಪೈಕಿ 4 ಜನರಿಗೆ ಬೆನ್ನುಮೂಳೆ ಫ್ರಾಕ್ಚರ್ ಹಾಗೂ ಒಬ್ಬರಿಗೆ ಎದೆಯ ಭಾಗದಲ್ಲಿ ಗಾಯವಾಗಿದ್ದು, ಪರಿಸ್ಥಿತಿ ಸ್ಥಿರವಾಗಿದೆ.

ಇನ್ನುಳಿದ 4 ಜನರಿಗೆ ಸಣ್ಣ ಪುಟ್ಟ ಮೂಗೇಟು, ತರಚುಗಾಯಗಳಾಗಿದ್ದು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರಿಗೂ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ. ಟ್ಟಡ ನಿರ್ಮಾಣ ಸ್ಥಳದಲ್ಲಿ ಎಲ್ಲಾ ಕಾರ್ಮಿಕರು ಹಾಗು ಸಿಬ್ಬಂದಿಗಳು ಕಡ್ಡಾಯವಾಗಿ ರಕ್ಷಣಾ ಸಾಧನಗಳು ಮತ್ತು ಸಲಕರಣೆಗಳನ್ನು ಬಳಸಬೇಕು ಮತ್ತು ಇನ್ನು ಮುಂದೆ ಇಂತಹ ಅಚಾತುರ್ಯಗಳು ನಡೆಯದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Next Article