ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿವೃತ್ತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

11:03 PM Feb 20, 2024 IST | Samyukta Karnataka

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಸದಸ್ಯರು ಮಂಗಳವಾರ ಸ್ವಾತಂತ್ರö್ಯ ಉದ್ಯಾನದಲ್ಲಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾರೆ.
ಹಿತರಕ್ಷಣಾ ವೇದಿಕೆಯ ಜಯದೇವರಾಜೇ ಅರಸು ಮಾತನಾಡಿ, ಜನವರಿ ೨೦೨೦ ರಿಂದ ಫೆಬ್ರವರಿ ೨೦೨೩ರವರೆಗೆ ರಾಜ್ಯ ರಸ್ತೆ ಸಾರಿಗೆಯ ೪ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ನೌಕರರಿಗೆ ಶೇ.೧೫ರಷ್ಟು ವೇತನ ಹೆಚ್ಚಳ, ಶೇ.೪೫.೨೫ ಬಿಡಿಎ ಮರ್ಜ್, ಇಂಕ್ರಿಮೆಂಟ್ ಹೆಚ್ಚಳ ಸೇರಿಸಿ ವೇತನ ಪರಿಷ್ಕರಣೆ ಮಾಡಬೇಕು. ಜೊತೆಗೆ ೩೮ ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜನವರಿ ೨೦೨೦ ರಿಂದ ಫೆಬ್ರವರಿ ೨೦೨೩ರವರೆಗೆ ರಾಜ್ಯ ರಸ್ತೆ ಸಾರಿಗೆಯ ೪ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದವರಿಗೆ ನೀಡುವ ಶಾಸನಬದ್ಧ ಸೌಲಭ್ಯವನ್ನು ನಿವೃತ್ತ ನೌಕರರು ಕೇಳಬೇಕಾಗಿಯೇ ಇಲ್ಲ. ಆಡಳಿತ ವರ್ಗವೇ ಎಲ್ಲರೊಟ್ಟಿಗೆ ಆದೇಶ ನೀಡಬೇಕಿತ್ತು, ಆದರೆ ಇದುವರೆಗೂ ನೀಡಿಲ್ಲ ಎಂದು ತಿಳಿಸಿದರು.
ಆದೇಶ ನೀಡದೆ ಇದ್ದ ಬಗ್ಗೆ ನಿವೃತ್ತ ನೌಕರರು ಸಭೆ ನಡೆಸಿ ಆಡಳಿತ ವರ್ಗಕ್ಕೆ ಕಳೆದ ಸೆಪ್ಟೆಂಬರ್‌ನಲ್ಲಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಮುಂದೆ ಸೇರಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿ ಕೂಡಲೇ ಆದೇಶ ಮಾಡಿ ಆರ್ಥಿಕ ಸೌಲಭ್ಯಗಳನ್ನು ಜಾರಿ ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೂ ಕಾರ್ಯರೂಪಕ್ಕೆ ಬಂದಿಲ್ಲದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನಿವೃತ್ತ ನೌಕರರು ಹಲವು ಜಿಲ್ಲೆಗಳಿಂದ ಆಗಮಿಸಿ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

Next Article