ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೀಡಿದವರಿಗೇ ಮತ್ತೆ ಪ್ರಶಸ್ತಿ ನೀಡಿ ಎಡವಟ್ಟು!

09:36 PM Oct 31, 2024 IST | Samyukta Karnataka

ಮೈಸೂರು: ಈ ಹಿಂದೆ ಪ್ರಶಸ್ತಿ ಸ್ವೀಕರಿಸಿದ್ದವರಿಗೇ ಮತ್ತೊಮ್ಮೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪುರಸ್ಕಾರ ಪ್ರಕಟಿಸುವ ಮೂಲಕ ಮೈಸೂರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಡವಟ್ಟು ಮಾಡಿದೆ. ನಗರದ ಕವಯಿತ್ರಿ ಪುಷ್ಪಾ ಅಯ್ಯಂಗಾರ್ ಅವರಿಗೆ ೨೦೨೧ ರಲ್ಲಿ ಸಾಹಿತ್ಯ ಮುತ್ತು ಸಮಾಜ ಸೇವೆ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ಇವರನ್ನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಗಿತ್ತು. ಈ ಬಾರಿಯ ಪಟ್ಟಿಯಲ್ಲಿಯೂ ಮತ್ತೆ ಇವರ ಹೆಸರು ಕಾಣಿಸಿಕೊಂಡಿದೆ. ಹಿಂದಿನ ಸಾಲಿನ ಸಾಧಕರ ಪಟ್ಟಿಯ ವಿವರ ಗಮನಿಸಿದೇ ಅಪರ ಜಿಲ್ಲಾಧಿಕಾರಿ ನೇತೃತ್ವದ ಆಯ್ಕೆ ಸಮಿತಿಯು ಪಟ್ಟಿ ಪ್ರಕಟಿಸಿ ಬೇಜವಾಬ್ದಾರಿತನ ತೋರಿರುವುದು ಈ ಪ್ರಕರಣದಲ್ಲಿ ಎದ್ದು ಕಾಣುತ್ತಿದೆ. ಇದೇ ವೇಳೆ ತಮಗೆ ಮತ್ತೆ ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪುಷ್ಪ ಅಯ್ಯಂಗಾರ್ ಸ್ಪಷ್ಟನೆ ನೀಡಿ, ಈ ಘಟನೆ ಅಚ್ಚರಿ ತಂದಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತಾವು ಹೋಗುವುದಿಲ್ಲ. ಅರ್ಹರಿಗೆ ಈ ಪ್ರಶಸ್ತಿಯನ್ನು ಜಿಲ್ಲಾಡಳಿತ ನೀಡಲಿ ಎಂದರು.

Next Article