For the best experience, open
https://m.samyuktakarnataka.in
on your mobile browser.

ನೀಡಿರುವ ಗೌರವ ಸ್ಮರಿಸುವುದು ತಪ್ಪೇ

01:05 PM Nov 18, 2023 IST | Samyukta Karnataka
ನೀಡಿರುವ ಗೌರವ ಸ್ಮರಿಸುವುದು ತಪ್ಪೇ

ಬೆಂಗಳೂರು: ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ.
ಹೈದರಾಬಾದ್​​ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳ ಕುರಿತು ನೀಡಿರುವ ಹೇಳಿಕೆ ವಿವಾದ ಪಡೆದ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಾಕಿ ಪ್ರಶ್ನಿಸಿದ್ದಾರೆ, ಅವರು ತಮ್ಮ ಪೋಸ್ಟ್‌ನಲ್ಲಿ "ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ.
ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ ಸ್ಥಾನಮಾನವನ್ನು ಮಾತ್ರ ಹೇಳಿದ್ದೇನೆ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, BJP, JDS ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ. ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ" ಎಂದು ಬರೆದುಕೊಂಡಿದ್ದಾರೆ.