ನೀರಿನ ಟ್ಯಾಂಕಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಕಾರ್ಮಿಕರ ರಕ್ಷಣೆ
08:21 PM Jan 13, 2025 IST | Samyukta Karnataka
ಬಾಗಲಕೋಟೆ: ವಾಟರ್ ಟ್ಯಾಂಕ್ ಸ್ವಚ್ಛಗೊಳಿಸಲು ಹೋಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಇಬ್ಬರು ಕಾರ್ಮಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ ರಕ್ಷಿಸಿದ ಘಟನೆ ನವನಗರದಲ್ಲಿ ನಡೆದಿದೆ.
ನವನಗರದ ೨೭ನೇ ಸೆಕ್ಟರ್‌ನಲ್ಲಿ ಮನೆ ಕೆಳಭಾಗದಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಕಾರ್ಮಿಕರು ಇಬ್ಬರು ನೀರಿನ ಟ್ಯಾಂಕ್‌ಗೆ ಇಳಿದಿದ್ದರು. ಆಸಿಡ್ ಬಳಸಿ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ಅದರ ಘಾಟು ತಾಳದೆ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅಗ್ನಿಶಾಮದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರಿಂದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ನವನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಇಬ್ಬರಿಗೂ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಕಾರ್ಮಿಕರಿಬ್ಬರು ಮುಚಖಂಡಿ ತಾಂಡಾದವರು ಎಂದು ತಿಳಿದು ಬಂದಿದೆ.