ನೀರಿನ ದರ ಏರಿಕೆಯ ಸುಳಿವು ಕೊಟ್ಟ ಡಿ ಕೆ ಶಿವಕುಮಾರ
ಬೆಂಗಳೂರು: ನೀರಿನ ದರ 8-9 ವರ್ಷದಿಂದ ಏರಿಕೆ ಮಾಡಿಲ್ಲ. ಎಷ್ಟು ದರ ಏರಿಕೆ ಮಾಡಬೇಕು ಅಂತ ನಿರ್ಧಾರ ಮಾಡಿಲ್ಲ. ಕಮಿಟಿ ಸಭೆ ಮತ್ತು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹೇಳಿದ್ದಾರೆ.
ಇಂದು ವಿಧಾನನಸೌಧದ ಮುಂಭಾಗದಲ್ಲಿ 110 ಹಳ್ಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದರು. ಜೊತೆಗೆ ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ ಹಾಗೂ ವರುಣಮಿತ್ರ ತರಬೇತಿ ಹಾಗೂ ಯುನೈಟೆಡ್ ನೇಷನ್ ಇನೋವೇಷನ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯುರಿಟಿ ಇನ್ ಬೆಂಗಳೂರು ಸಿಟಿ ಯೋಜನೆ ಯೋಜನೆಗಳಿಗೂ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ವಾಟರ್-ಪವರ್ ಈ ಎರಡು ಪ್ರಮುಖವಾಗಿದ್ದು, ಎರಡು ಇಲಾಖೆ ನಾನು ನಿರ್ವಹಿಸುತ್ತಿದ್ದು. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಚರ್ಚೆ ನಡೆದಿತ್ತು. ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗಲಿದೆ ಎಂದು ಮಾಹಿತಿ ನೀಡಿದ್ದೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ನಂತರ ಯೋಜನೆ ಕೈ ಬಿಟ್ಟಿದ್ದೆವು. ಈಗ ನಾನು ಸಚಿವನಾದ ಮೇಲೆ ಮತ್ತೆ ಕೆಲವರು ಖಾಸಗೀಕರಣದ ಬಗ್ಗೆ ಬಂದು ಮಾತಾಡಿದ್ದರು. ನಾನು ಇದು ಆಗಲ್ಲ ಎಂದು ಹೇಳಿದ್ದೇನೆ, ನೀರಿನ ದರ ಸಾಕಷ್ಟು ವರ್ಷದಿಂದ ಏರಿಸಿಲ್ಲ. ಜಲಮಂಡಳಿ ಉಳಿಸಬೇಕು ಅಂದ್ರೆ ನೀರಿನ ಬಿಲ್ ಏರಿಕೆ ಅನಿವಾರ್ಯ. ಇದರ ಬಗ್ಗೆ ಬಿಡಬ್ಲ್ಯೂಎಸ್‍ಎಸ್‍ಬಿ ಜನರಿಗೆ ಜಾಗೃತಿ ಮೂಡಿಸಬೇಕು. ನೀರಿದ ದರ 8-9 ವರ್ಷದಿಂದ ಏರಿಕೆ ಮಾಡಿಲ್ಲ. ನೀರಿನ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗ್ಬೇಕು. ಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ ಆಗುತ್ತಿಲ್ಲ. ಮಂಡಳಿಯು ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್ ಗೆ ನೋಡಿ ದರ ನಿಗದಿ ಮಾಡಬೇಕು. ಎಷ್ಟು ದರ ಏರಿಕೆ ಮಾಡ್ಬೇಕು ಅಂತ ನಿರ್ಧಾರ ಮಾಡಿಲ್ಲ. ಕಮಿಟಿ ಸಭೆ ಮತ್ತು ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡುತ್ತೇವೆ ಎಂದರು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ನೀರಿನ ಬಳಕೆಯೂ ಹೆಚ್ಚಾಗಿದೆ. ಮೇಕೆದಾಟು ಯೋಜನೆ ಬಗ್ಗೆ ನನಗೆ ಭರವಸೆ ಇದೆ. ಆದಷ್ಟು ಬೇಗ ಅದನ್ನು ಅನುಷ್ಠಾನ ಮಾಡುತ್ತೇವೆ. ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಲೋ ಮೀಟರ್ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಹೊಸ ಕಾನೂನು ಬಂದಿದೆ. ರಾಜ್ಯಪಾಲರು ಇದಕ್ಕೆ ಸಹಿ ಹಾಕಿದ್ದಾರೆ. ಬೆಂಗಳೂರಿನ ಜನರಿಗೆ ನೀರು ಪೂರೈಸಲು ನಾವು ಬದ್ಧರಾಗಿದ್ದು, ಅದಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.