For the best experience, open
https://m.samyuktakarnataka.in
on your mobile browser.

ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ, ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ

09:11 PM Aug 10, 2024 IST | Samyukta Karnataka
ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ  ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಪಾದಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ 'ಚೆಲುವ ಚಾಮರಾಜನಗರ' "ಭರಚುಕ್ಕಿ ಜಲಪಾತೋತ್ಸವ" ವನ್ನು ಉದ್ಘಾಟಿಸಿ ಮಾತನಾಡಿದರು. ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರ್ತೇನೆ ಎಂದು ಬಿಜೆಪಿ-ಜೆಡಿಎಸ್ ಅವರ ಜಂಟಿ ಷಡ್ಯಂತ್ರವನ್ನು ಲೇವಡಿ ಮಾಡಿದರು.
ಸಿದ್ದರಾಮಯ್ಯರ ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆಯಾಗಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋದ್ಯಮ ನೀತಿಯನ್ನೂ ರಚಿಸಲಾಗುವುದು ಭರವಸೆ ನೀಡಿದರು.
ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುಬರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕವಾಗಿ ವೇಗದ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

Tags :