ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೂತನ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣ

07:35 PM Sep 30, 2024 IST | Samyukta Karnataka

ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರಿ ನಿರ್ಮಾಣವಾಗಬೇಕು

ಮೈಸೂರು:ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.

•ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಕ್ರಮ ವಹಿಸಬೇಕು

•ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು.

•ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು.

•ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಬೇಕು.

•ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪೌಂಡ್ ನಿರ್ಮಿಸುವ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಬೇಕು.

•ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.

•ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರಿ ನಿರ್ಮಾಣವಾಗಬೇಕು.

•ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕು.

•ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಲೂ ಪ್ರಸ್ತಾವನೆಯನ್ನು ಸಲ್ಲಿಸಲಿ ಎಂದರು.

Next Article