For the best experience, open
https://m.samyuktakarnataka.in
on your mobile browser.

ನೇಹಾ ಹತ್ಯೆ ಖಂಡಿಸಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

12:56 PM Apr 22, 2024 IST | Samyukta Karnataka
ನೇಹಾ ಹತ್ಯೆ ಖಂಡಿಸಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ಮೈಸೂರ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ಹದಗೆಟ್ಟ ಕಾನೂನು ಸುವ್ಯವಸ್ಥೆ ಖಂಡಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಓಲೈಕೆ ರಾಜಕಾರಣಕ್ಕಾಗಿ ಸಮಾಜಘಾತುಕ ಶಕ್ತಿಗಳ ಪುಷ್ಟೀಕರಣ ಮಾಡುತ್ತಾ ಹಿಂದೂಗಳ ರಕ್ಷಣೆಗೆ ಕಿಂಚಿತ್ತೂ ಕಾಳಜಿ ವಹಿಸಿದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಕರೆ ನೀಡಿದ್ದಾರೆ.