ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೈಋತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಕೆ.ಎಸ್. ಜೈನ್ ಅಧಿಕಾರ ಸ್ವೀಕಾರ

12:05 AM Feb 21, 2024 IST | Samyukta Karnataka

ಹುಬ್ಬಳ್ಳಿ : ನೈರುತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಕೆ.ಎಸ್. ಜೈನ್ ಅವರು ಅಧಿಕಾರ ವಹಿಸಿಕೊಂಡರು.

ಕೆ.ಎಸ್. ಜೈನ್ ಅವರು ರೂರ್ಕಿ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಯನ್ನು 1987 ರಲ್ಲಿ ಪಡೆದಿದ್ದಾರೆ.

ನೈಋತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುನ್ನ, ಕೆ.ಎಸ್.ಜೈನ್ ಅವರು ದಕ್ಷಿಣ ಮಧ್ಯ ರೈಲ್ವೆಯಲ್ಲಿ ಪ್ರಧಾನ ಮುಖ್ಯ ಮೆಕ್ಯಾನಿಕಲ್ ಎಂಜಿನಿಯರ್ ಸ್ಥಾನವನ್ನು ಹೊಂದಿದ್ದರು.
ಅವರ ವೃತ್ತಿಜೀವನದುದ್ದಕ್ಕೂ ನಿರಂತರವಾಗಿ ಅನನ್ಯ ಸೇವೆಯನ್ನು ಸಲ್ಲಿಸಿದ್ದಾರೆ.

ಕೆ.ಎಸ್. ಜೈನ್ ಅವರ ಹೊಸ ವೃತ್ತಿ ಜೀವನಕ್ಕಾಗಿ ನಾವು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ, ನೈಋತ್ಯ ರೈಲ್ವೆಯ ಬೆಳವಣಿಗೆ ಮತ್ತು ದಕ್ಷತೆಗೆ ಅವರ ನಿರಂತರ ಕೊಡುಗೆಗಳನ್ನು ನೋಡಲಿದ್ದೇವೆ" ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ತಿಳಿಸಿದ್ದಾರೆ

Next Article