ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪಂಚಮಸಾಲಿ ಶ್ರೀಗಳೊಂದಿಗೆ ಸಿಎಂ ಮಾತುಕತೆ

04:47 PM Dec 12, 2023 IST | Samyukta Karnataka

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪಂಚಮಸಾಲಿ 2ಎ ಮೀಸಲಾತಿ ಸಂಬಂಧಪಟ್ಟಂತೆ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದವರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿರುವ ಅವರು ಈ ವೇಳೆ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರು ಮತ್ತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ಅಡ್ವೊಕೇಟ್ ಜನರಲ್ ಅವರ ಜತೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಿರಿಯ ಶಾಸಕ ಬಿ.ಆರ್.ಪಾಟೀಲ್, ವಿಜಯಾನಂದ ಕಾಶಪ್ಪನವರ್, ಬಸನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ಸಿ.ಸಿ.ಪಾಟೀಲ್, ವಿಧಾನ‌ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಪಂಚಮಸಾಲಿ ಸಮಾಜದ ಹಲವು ಮುಖಂಡರು ನಿಯೋಗದಲ್ಲಿದ್ದರು.

Next Article