ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪಕ್ಷದ ನಾಯಕರು ಸಂಸ್ಕಾರ ಕಲಿಸಿಕೊಟ್ಟಿದ್ದಾರೆ

03:08 PM Mar 26, 2024 IST | Samyukta Karnataka

ಬೆಂಗಳೂರು : 2 ಕೋಟಿ ಉದ್ಯೋಗಗಳನ್ನು ಮೋದಿ ಕೊಟ್ಟಿದ್ದರೆ ನಾನೂ ಮೋದಿಗೆ ಜೈ ಎಂದು ಹೇಳುತ್ತಿದ್ದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಮೋದಿ ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂಬ ತಮ್ಮ ಹೇಳಿಕೆಯನ್ನು ತಂಗಡಗಿ ಸಮರ್ಥಿಸಿಕೊಂಡಿದ್ದಾರೆ. ನಾನು ಮಾತಾಡಿದ್ದರಲ್ಲಿ ಯಾವುದಾದರೂ ಅಶ್ಲೀಲ ಪದಗಳಿತ್ತಾ? ನಾನು ಮಾಡಿದ ಭಾಷಣ ಇನ್ನೊಮ್ಮೆ ಕೇಳಿ ಉತ್ತರ ಕೊಡಲಿ, ಉತ್ತರ ಕರ್ನಾಟಕ ಭಾಷೆಯೊಳಗೆ ನಾನು ಭಾಷಣ ಮಾಡಿದ್ದೆ. ಸಹಜವಾದ ಮಾತುಗಳು ಬಂದಿದೆ. ಒಳ್ಳೆಯ ಗೆಳೆತನದೊಳಗೂ ನಾವು ಬೇರೆಬೇರೆ ಭಾಷೆ ಬಳಸುತ್ತೇವೆ. ನಾವು ಉತ್ತರ ಕರ್ನಾಟಕದವರು ನಮಗೆ ಪುಸ್ತಕದ ಭಾಷೆ ಮಾತನಾಡಲು ಬರುವುದಿಲ್ಲ. ನಮ್ಮ ಭಾಷೆ ಒರಟು. ಬಿಜೆಪಿಯ ಸಂಸ್ಕಾರ ಏನು ಅಂತ ನನಗೂ ಗೊತ್ತಿದೆ, ಅವರಿಂದ ಕಲಿಬೇಕಿಲ್ಲ, ಸಂಸ್ಕಾರದ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಬಿಜೆಪಿಯ ಭಾಷೆಯಲ್ಲಿ ಉತ್ತರ ಕೊಡುವುದೂ ಗೊತ್ತು. ನನಗೆ ನಮ್ಮ ಪಕ್ಷದ ನಾಯಕರು ಸಂಸ್ಕಾರ ಕಲಿಸಿಕೊಟ್ಟಿದ್ದಾರೆ. ಯುವಕರಿಗೆ ಬಿಜೆಪಿ ದಾರಿ ತಪ್ಪಿಸುತ್ತಿದ್ದಾರೆ ಅಂತ ನಾನು ಕಳಕಳಿಯ ಮಾತನಾಡಿದ್ದೇನೆ ಎಂದರು.

Next Article