ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರು

02:46 PM May 14, 2024 IST | Samyukta Karnataka

ಮೈಸೂರು: ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಕರ್ನಾಟಕ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ.

ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು.

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು. ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.

Next Article