ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪರಿಹಾರಧನಕ್ಕೆ ಜೋಶಿ ಆಗ್ರಹ

10:47 AM Jul 27, 2024 IST | Samyukta Karnataka

ವೆಂಕಟಾಪುರ ಗ್ರಾಮದಲ್ಲಿ ಮನೆ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಬೆಂಗಳೂರು: ಸತತ ಮಳೆಯಿಂದಾಗಿ ಶುಕ್ರವಾರ ರಾತ್ರಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮನೆ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ, ಮೃತರ ಕುಟುಂಬಕ್ಕೆ ಪರಿಹಾರಧನ ನೀಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವೆಡೆ ಅವಘಡಗಳು ಸಂಭವಿಸಿದ್ದು, ಇಂದು ವೆಂಕಟಾಪುರ ಗ್ರಾಮದಲ್ಲಿ ಮನೆಗೋಡೆ ಕುಸಿದು ಯಲ್ಲಪ್ಪಾ ಎಂಬವರು ಮೃತರಾದ ಸುದ್ಧಿ ಕೇಳಿ ದುಃಖವಾಗಿದೆ ಮತ್ತು ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ರಾಜ್ಯ ಸರಕಾರ ಕೂಡಲೇ ಚಿಕಿತ್ಸೆಗೆ ಸಹಕಾರ ನೀಡಬೇಕು ಮತ್ತು ಮೃತರ ಕುಟುಂಬಕ್ಕೆ ಪರಿಹಾರಧನ ನೀಡಬೇಕೆಂದು ಆಗ್ರಹಿಸುತ್ತೇನೆ. ರಾಜ್ಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದು ರಾಜ್ಯ ಸರ್ಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಅವಘಡಗಳಿಗೆ ಅವಕಾಶ ಕೊಡದೆ ಕಾರ್ಯಪ್ರವೃತ್ತರಾಗಬೇಕು ಎಂದಿದ್ದಾರೆ.

ಘಟನೆ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮನೆ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಯಲ್ಲಪ್ಪ ಇಟ್ಟಿ ಮೃತಪಟ್ಟ ವ್ಯಕ್ತಿ. ಮನೆ ಕುಸಿದು ಬಿದ್ದ ವೇಳೆ ಯಲ್ಲಪ್ಪ ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಯಲ್ಲಪ್ಪ ಅವರ ಪತ್ನಿ ಹನುಮವ್ವ, ಪುತ್ರಿ ಯಲ್ಲವ್ವ ತೀವ್ರವಾಗಿ ಗಾಯಗೊಂಡಿದ್ದಾರೆ.

ಸತತ ಮಳೆಗೆ ಮನೆ ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ

Next Article