For the best experience, open
https://m.samyuktakarnataka.in
on your mobile browser.

ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ

01:34 PM Aug 26, 2024 IST | Samyukta Karnataka
ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ದಿನಾಂಕ:27-08-2024ರಂದು ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವಾದ್ದರಿಂದ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣ ಹಾಗೂ ಇತರೆ ಯಾವುದೇ ತಪ್ಪು ಮಾಹಿತಿಗಳಿಗೆ ಮತ್ತು ಉಹಾಪೋಹಗಳಿಗೆ ಗೊಂದಲಕ್ಕೀಡಾಗದೇ ಆಯೋಗದ ವೆಬ್‌ಸೈಟ್ http://kpsc.kar.nic.inನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ತಮಗೆ ಹಂಚಿಕೆಯಾಗಿರುವ ಪರೀಕ್ಷಾ ಉಪಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಅಭ್ಯರ್ಥಿಗಳ ಮಾಹಿತಿಗಾಗಿ ತಿಳಿಸಿದೆ ಎಂದಿದ್ದಾರೆ