ಪಾರ್ಲರ್ ಮೇಲೆ ದಾಳಿ: 14 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
07:39 PM Jan 24, 2025 IST | Samyukta Karnataka
ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ರಾಮ್ ಸೇನಾ ಕಾರ್ಯಕರ್ತರಿಂದ ಮಸಾಜ್ ಪಾರ್ಲರ್ ಮೇಲೆ ಗುರುವಾರ ದಾಳಿ ನಡೆಸಲಾಗಿದ್ದು, ಘಟನೆ ನಡೆದ ಕೆಲ ಗಂಟೆಗಳಲ್ಲೇ ರಾಮ್ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿ 14 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಬರ್ಕೆ ಪೊಲೀಸರು ಮಂಗಳೂರು ಜೆಎಂಎಫ್‌ಸಿ 6ನೇ ಕೋರ್ಟ್‌ಗೆ ಹಾಜರುಪಡಿಸಿದ್ದು, ಫೆ. 7ರವರೆಗೆ ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.