For the best experience, open
https://m.samyuktakarnataka.in
on your mobile browser.

ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್

11:12 AM May 21, 2024 IST | Samyukta Karnataka
ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್

ಕೃಷಿಗಾಗಿ ಸಾಲ ಮಾಡಿದ್ದ ರೈತ, ಬರದಿಂದಾಗಿ ನಷ್ಟಕ್ಕೆ ಸಿಲುಕಿ ಸಾಲ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ, ಸಾಲದಾತ ಮಹಿಳೆ ರೈತನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿಟ್ಟಿದ್ದು, ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ನಡೆದಿದೆ.

ಬೆಂಗಳೂರು: ಗೂಂಡಾಗಳು, ಮೀಟರ್ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ‘ನೆರಳಿನ ಭಾಗ್ಯ’ ಕಲ್ಪಿಸಿಕೊಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿಯೇ ಸಾಲದಾತರು ರೈತನ ಕುಟುಂಬದ ಮೇಲೆ ದೌರ್ಜನ್ಯ ಎಸಗಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ, ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಮಾಡಿಕೊಂಡಿದ್ದ ಖಾಸಗಿ ಸಾಲ ತೀರಿಸಲಾಗದೇ ಸಾಲಕೊಟ್ಟವರಿಂದ ಪತ್ನಿ, ಪುತ್ರನನ್ನು ನಿಷೇಧಿತ ಜೀತ ಪದ್ಧತಿ ಹಾಗೂ ಅಕ್ರಮ ಗೃಹ ಬಂಧನದ ಶಿಕ್ಷೆ ಅನುಭವಿಸುವ, ಅಪಮಾನ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಆಡಳಿತ ಕಾಲದಲ್ಲಿ ಈ ರಾಜ್ಯದ ಜನತೆ ಇನ್ನೂ ಏನೇನು ಅನುಭವಿಸಬೇಕೋ? ತಿಳಿಯದಾಗಿದೆ. ಗೂಂಡಾಗಳು, ಮೀಟರ್ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ‘ನೆರಳಿನ ಭಾಗ್ಯ’ ಕಲ್ಪಿಸಿಕೊಡುತ್ತಿದೆ.
ಈ ಸರ್ಕಾರಕ್ಕೆ ನೈತಿಕತೆಯಿದ್ದರೆ ಕೂಡಲೇ ಯಮಕನಮರಡಿ ರೈತನ ಆತ್ಮಹತ್ಯೆ ಪ್ರಕರಣದ ಕುರಿತು ಕಠಿಣ ಕ್ರಮ ಜರುಗಿಸಿ ಮುಂದೆಂದೂ ಇಂಥಾ ಹೀನ ಘಟನೆಗಳು ರಾಜ್ಯದಲ್ಲಿ ತಲೆ ಎತ್ತದಂತೆ ಎಚ್ಚರಿಕೆ ವಹಿಸಲಿ, ರೈತ ಸಮೂಹಕ್ಕೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ರೂಪಿಸಲಿ, ಮೃತ ರೈತನ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಹಾಗೂ ಭದ್ರತೆ ಒದಗಿಸಲಿ ಎಂದಿದ್ದಾರೆ.