ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲು ಮನವಿ

12:26 PM Oct 19, 2024 IST | Samyukta Karnataka

ಬೆಂಗಳೂರು: ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ.
ಈ ನಿಟ್ಟಿನಲ್ಲಿ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು
ಇಡಿ ಹಾಗು ಡಿಜಿಪಿ ಅವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

Tags :
#PASSPORT#ಪಾಸ್ ಪೋರ್ಟ್#ಬೆಂಗಳೂರು
Next Article