‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಸಂಪುಟ ಅಸ್ತು
04:58 PM Nov 06, 2024 IST
|
Samyukta Karnataka
ಬೆಂಗಳೂರು: ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟವು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯೊಂದಿಗೆ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಬ್ಯಾಂಕ್‌ಗಳಿಂದ ಮೇಲಾಧಾರ ಮತ್ತು ಜಾಮೀನುದಾರ ರಹಿತ ಸಾಲವನ್ನು ಪಡೆಯಲು ಸಾಧ್ಯವಾಗುತ್ತದೆ. ವಾರ್ಷಿಕ 22 ಲಕ್ಷ ವಿದ್ಯಾರ್ಥಿಗಳು ಯೋಜನೆಯ ಲಾಭ ಪಡೆಯಬಹುದು. 2024-25 ರಿಂದ 2030-31 ರವರೆಗೆ ಈ ಯೋಜನೆಗಾಗಿ ₹3600 ಕೋಟಿಯನ್ನು ಕೇಂದ್ರ ಸರ್ಕಾರ ಮೀಸಲಿಡಲಿದೆ ಹಾಗೂ ಈ ಯೋಜನೆಯು ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ ಎಂದಿದ್ದಾರೆ.
Next Article