ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪುಡಿ ರಾಜಕಾರಣಿಗಳಂತೆ ಮೋದಿ ಮಾತನಾಡಬಾರದು

06:12 PM Nov 11, 2024 IST | Samyukta Karnataka

ಹುಬ್ಬಳ್ಳಿ: ತಾವು ಮಾಡಿರುವ ಅಭಿವೃದ್ಧಿ ಕೆಲಸ, ಜನ ಕಲ್ಯಾಣಕ್ಕೆ ಕೇಂದ್ರ ಹಾಕಿಕೊಂಡ ಯೋಜನೆಗಳನ್ನು ಪ್ರಸ್ತಾಪಿಸಿ ಚುನಾವಣಾ ಪ್ರಚಾರ ಮಾಡುವುದನ್ನು ಬಿಟ್ಟು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಹೇಳಿರುವ ಹಸಿ ಸುಳ್ಳು ಅವರ ಘನತೆಗೆ ಧಕ್ಕೆ ತರಲಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಮೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ಅವರು ಮಹಾರಾಷ್ಟ್ರ ಚುನಾವಣೆಯ ಪ್ರಚಾರದಲ್ಲಿ ಸಣ್ಣ ಪುಟ್ಟ ರಾಜಕಾರಣಿಗಳಂತೆ ಭಾಷಣ ಮಾಡುತ್ತಿದ್ದಾರೆಂದು ಟೀಕಿಸಿದರು.
ಮೋದಿ ತಮ್ಮ ಸ್ಥಾನಮಾನಕ್ಕೆ ತಕ್ಕಂತೆ ಮಾತನಾಡಬೇಕು. ಸುಮಾರು ೧ ಕೋಟಿಗೂ ಅಧಿಕ ಕುಟುಂಬಗಳನ್ನು ಬಡತನ ರೇಖೆಗಿಂತ ಮೇಲೆತ್ತಲು ರಾಜ್ಯ ಸರ್ಕಾರ ೫ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಯೋಜನೆಗಳು ಬಹಳ ಜನಪ್ರಿಯವೂ ಆಗಿವೆ. ಹೀಗಾಗಿ ಸಿದ್ದರಾಮಯ್ಯ ಅವರ ಜನಪ್ರೀಯತೆಯೂ ಹೆಚ್ಚಿದೆ. ಅದನ್ನು ಸಹಿಸಲಾಗದ ಮೋದಿ ಅವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅಕಸ್ಮಾತ ಮೋದಿ ಅವರ ಜಾಗೆಯಲ್ಲಿ ವಾಜಪೇಯಿ ಅವರಿದ್ದರೆ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಸನ್ಮಾನ ಮಾಡುತ್ತಿದ್ದರು ಎಂದರು.

Next Article