ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪೆನ್​ಡ್ರೈವ್​ ಪ್ರಕರಣ: ತಪ್ಪು ಮಾಡಿದವರ ವಿರುದ್ಧ ಪಕ್ಷದಿಂದಲೂ ಕ್ರಮ

02:51 PM Apr 29, 2024 IST | Samyukta Karnataka

ಶಿವಮೊಗ್ಗ: ಹಾಸನ ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿದವರ ವಿರುದ್ದ ಪಕ್ಷದಿಂದಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಈಬಗ್ಗೆ ತನಿಖೆ ನಡೆಸಲು ಎಸ್​ಐಟಿ ರಚನೆ ಮಾಡಲಾಗಿದೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗುತ್ತದೆ. ಆದರೆ ಇದರಲ್ಲಿ ಕುಟುಂಬವನ್ನು ಎಳೆದು ತರುವುದು ಸರಿಯಲ್ಲ. ವ್ಯಕ್ತಿ ಬಗ್ಗೆ ಚರ್ಚಿಸಬೇಕು. ಇದರಲ್ಲಿ ದೇವೇಗೌಡರು​ ಮತ್ತು ಕುಮಾರಸ್ವಾಮಿ ಹೆಸರು ತರುವುದು ಸೂಕ್ತವಲ್ಲ. ತಪ್ಪು ಮಾಡಿದ ವ್ಯಕ್ತಿಯನ್ನು ನಾವು ವಹಿಸಿಕೊಳ್ಳುತ್ತಿಲ್ಲ. ಎಸ್​ಐಟಿ ರಚನೆಯಾಗಿದೆ ಅವರು ತನಿಖೆ ನಡೆಸಿ ವರದಿ ನೀಡುತ್ತಾರೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಇಂತಹ ವಿಷಯಗಳು ನನಗೊಬ್ಬನಿಗೆ ಅಲ್ಲ, ಇಡೀ ಸಮಾಜಕ್ಕೆ ಮುಜಗರ ಆಗುತ್ತದೆ. ಎಸ್​ಐಟಿ ತನಿಖೆಯು ಪಾರದರ್ಶಕವಾಗಿ ನಡೆಯಬೇಕು ಎಂದು ಮನವಿ ಮಾಡಿದರು.
ನಾನಾಗಲಿ ದೇವೇಗೌಡರಾಗಲಿ ಮಹಿಳೆಯರನ್ನು ಗೌರವದಿಂದ ಕಂಡಿದ್ದೇವೆ. ಚುನಾವಣೆ ಮುಂಚೆ ಈ ವಿಷಯ ತಿಳಿದಿದ್ದರೆ ಪಕ್ಷದಿಂದ ಕ್ರಮ ಕೈಗೊಳ್ಳಬಹುದಾಗಿತ್ತು. ಸದ್ಯ ತನಿಖೆ ವರದಿ ಬರಲಿ ಅದರ ಬಳಿಕ ಮತನಾಡುವೆ ಎಂದು ತಿಳಿಸಿದರು. ಉಳಿದ ಕಡೆ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.

Next Article