ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪೆನ್ ಡ್ರೈವ್ ಪ್ರಕರಣ ಬಳಿಕ ಫಸ್ಟ್ ರಿಯಾಕ್ಷನ್: ವಕೀಲರ ಮೂಲಕ ಸಿಐಡಿಗೆ ಮನವಿ ಮಾಡಿದ ಪ್ರಜ್ವಲ್

04:39 PM May 01, 2024 IST | Samyukta Karnataka

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ಲಗತ್ತಿಸಿರುವ ಪತ್ರದಲ್ಲಿ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆರ್.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್ ನಲ್ಲಿ ತಾವು ದಿನಾಂಕ:01-05-2024 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದು, ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದಿದ್ದಾರೆ.

Next Article