For the best experience, open
https://m.samyuktakarnataka.in
on your mobile browser.

ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ: ರೌಡಿಶೀಟರ್ ಗೆ ಗುಂಡು

11:39 AM May 30, 2024 IST | Samyukta Karnataka
ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ  ರೌಡಿಶೀಟರ್ ಗೆ ಗುಂಡು

ಬೀದರ್ : ಹಲವಾರು ಪ್ರಕರಣಗಳಲ್ಲಿ ಶಾಮೀಲಾಗಿರುವ ರೌಡಿಶೀಟರ್ ಓರ್ವನನ್ನು ಬಂಧಿಸಿ ಕರೆತಂದ ಇಲ್ಲಿಯ ನೂತನ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.