ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪೊಲೀಸ್ ಕಸ್ಟಡಿಯಲ್ಲಿ ಮುನಿರತ್ನ

10:27 PM Sep 15, 2024 IST | Samyukta Karnataka

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.
ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಹಾಗೂ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ನೀಡಿದ ದೂರಿನ ಮೇರೆಗೆ ಡಬಲ್ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಶನಿವಾರ ಕೋಲಾರ ಜಿಲ್ಲೆಯ ಆಂಧ್ರಗಡಿ ಭಾಗದಲ್ಲಿ ಬಂಧನಕ್ಕೊಳಗಾದ ಶಾಸಕ ಮುನಿರತ್ನ ಅವರನ್ನು ಭಾನುವಾರ ನಸುಕಿನ ಜಾವ ಯಲಹಂಕದ ಕೋಗಿಲು ಪ್ರದೇಶದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ನಿವಾಸಕ್ಕೆ ಕರೆದೊಯ್ದು ಹಾಜರುಪಡಿಸಿದರು.
ಮುನಿರತ್ನ ವಿರುದ್ಧ ಪರಿಶಿಷ್ಟ ಜಾತಿ ನಿಂದನೆ ಹಾಗೂ ಗುತ್ತಿಗೆದಾರರನಿಗೆ ಲಂಚಕ್ಕಾಗಿ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿರುವ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ಒಂದು ವಾರ (೭ ದಿನ) ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಇದಕ್ಕೂ ಮುನ್ನ ಮುನಿರತ್ನ "ನನ್ನನ್ನು ನೋಟಿಸ್ ನೀಡದೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಮನೆಯ ಪಕ್ಕದಲ್ಲೇ ಪೊಲೀಸ್ ಠಾಣೆ ಇದೆ. ಕರೆದಿದ್ದರೆ ನಾನೇ ಹೋಗಿ ವಿಚಾರಣೆಗೆ ಹಾಜರಾಗುತ್ತಿದ್ದೆ. ನನ್ನ ಡ್ರೈವರ್ ಜತೆ ತಿರುಪತಿಗೆ ಹೊರಟಿದ್ದಾಗ ಮಾರ್ಗಮಧ್ಯೆ ನನ್ನನ್ನು ಬಂಧಿಸಿದ್ದಾರೆ. ನಾನು ಎಲ್ಲಿಗೂ ಓಡಿ ಹೋಗಿಲ್ಲ.
ರಾಜಕೀಯ ದ್ವೇಷದಿಂದ ಪೊಲೀಸರು ಈ ರೀತಿ ಮಾಡಿದ್ದಾರೆ. ನನಗೆ ಹೃದಯಸಂಬಂಧಿ ಸಮಸ್ಯೆ ಇದೆ, ಅಲ್ಲದೇ ಹರ್ನಿಯಾದಿಂದ ಬಳಲುತ್ತಿದ್ದೇನೆ. ಹೀಗಾಗಿ ನನ್ನನ್ನು ಬಿಡುಗಡೆ ಮಾಡಿ," ಎಂದು ನ್ಯಾಯಾಧೀಶರ ಎದುರು ಮನವಿ ಮಾಡಿದರು ಎನ್ನಲಾಗಿದೆ.
ಮುನಿರತ್ನ ಹಾಗೂ ಪೊಲೀಸರ ವಾದ ಆಲಿಸಿದ ನ್ಯಾಯಾಧೀಶರು, "ಆರೋಪಿತರನ್ನು ೨ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗುವುದು. ಕಸ್ಟಡಿಯಲ್ಲಿ ಅವರಿಗೆ ಪ್ರತಿದಿನ ಆರೋಗ್ಯ ಚಿಕಿತ್ಸೆ ಸೌಲಭ್ಯ ಒದಗಿಸಬೇಕು," ಎಂದು ಆದೇಶಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನ್ಯಾಯಾಧೀಶರ ನಿವಾಸದಿಂದ ವೈಯಾಲಿಕಾವಲ್ ಠಾಣೆ ಪೊಲೀಸರು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ಧ್ವನಿ ಮಾದರಿ ಎಫ್‌ಎಸ್‌ಎಲ್‌ಗೆ
ಗುತ್ತಿಗೆದಾರ ಹಾಗೂ ಮಾಜಿ ಕಾರ್ಪೊರೇಟರ್‌ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಮತ್ತು ಜಾತಿ ನಿಂದನೆ ಮಾಡಿದ ಶಾಸಕ ಮುನಿರತ್ನ ಮತ್ತು ಗುತ್ತಿಗೆದಾರ ಚಲುವರಾಜು ಅವರ ವೈರಲ್ ಆದ ಆಡಿಯೋ ಮತ್ತು ಇಬ್ಬರ ಧ್ವನಿಗಳ ಮಾದರಿಗಳನ್ನು ಸಂಗ್ರಹಿಸಿರುವ ಪೊಲೀಸರು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಎಫ್‌ಎಸ್‌ಎಲ್ ವರದಿಯ ಮೇಲೆ ಮುನಿರತ್ನ ಭವಿಷ್ಯ ನಿಂತಿದೆ.
ರಾಜಕೀಯ ದ್ವೇಷದಿಂದ ಪೊಲೀಸರು ಈ ರೀತಿ ಮಾಡಿದ್ದಾರೆ. ನನಗೆ ಹೃದಯಸಂಬಂಧಿ ಸಮಸ್ಯೆ ಇದೆ, ಅಲ್ಲದೇ ಹರ್ನಿಯಾದಿಂದ ಬಳಲುತ್ತಿದ್ದೇನೆ. ಹೀಗಾಗಿ ನನ್ನನ್ನು ಬಿಡುಗಡೆ ಮಾಡಿ," ಎಂದು ನ್ಯಾಯಾಧೀಶರ ಎದುರು ಮನವಿ ಮಾಡಿದರು ಎನ್ನಲಾಗಿದೆ.
ಮುನಿರತ್ನ ಹಾಗೂ ಪೊಲೀಸರ ವಾದ ಆಲಿಸಿದ ನ್ಯಾಯಾಧೀಶರು, "ಆರೋಪಿತರನ್ನು ೨ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗುವುದು. ಕಸ್ಟಡಿಯಲ್ಲಿ ಅವರಿಗೆ ಪ್ರತಿದಿನ ಆರೋಗ್ಯ ಚಿಕಿತ್ಸೆ ಸೌಲಭ್ಯ ಒದಗಿಸಬೇಕು," ಎಂದು ಆದೇಶಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನ್ಯಾಯಾಧೀಶರ ನಿವಾಸದಿಂದ ವೈಯಾಲಿಕಾವಲ್ ಠಾಣೆ ಪೊಲೀಸರು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ಧ್ವನಿ ಮಾದರಿ ಎಫ್‌ಎಸ್‌ಎಲ್‌ಗೆ : ಗುತ್ತಿಗೆದಾರ ಹಾಗೂ ಮಾಜಿ ಕಾರ್ಪೊರೇಟರ್‌ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಮತ್ತು ಜಾತಿ ನಿಂದನೆ ಮಾಡಿದ ಶಾಸಕ ಮುನಿರತ್ನ ಮತ್ತು ಗುತ್ತಿಗೆದಾರ ಚಲುವರಾಜು ಅವರ ವೈರಲ್ ಆದ ಆಡಿಯೋ ಮತ್ತು ಇಬ್ಬರ ಧ್ವನಿಗಳ ಮಾದರಿಗಳನ್ನು ಸಂಗ್ರಹಿಸಿರುವ ಪೊಲೀಸರು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಎಫ್‌ಎಸ್‌ಎಲ್ ವರದಿಯ ಮೇಲೆ ಮುನಿರತ್ನ ಭವಿಷ್ಯ ನಿಂತಿದೆ.

Next Article