For the best experience, open
https://m.samyuktakarnataka.in
on your mobile browser.

ಪೊಲೀಸ್ ನೇಮಕಾತಿ ಪರೀಕ್ಷೆಗೆ ವಸ್ತ್ರಸಂಹಿತೆ

08:13 PM Jan 24, 2024 IST | Samyukta Karnataka
ಪೊಲೀಸ್ ನೇಮಕಾತಿ ಪರೀಕ್ಷೆಗೆ ವಸ್ತ್ರಸಂಹಿತೆ

ಹುಬ್ಬಳ್ಳಿ: ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಯನ್ನು ಜ. ೨೮ರಂದು ನಡೆಸಲಾಗುತ್ತಿದೆ. ಸಂಬಂಧಪಟ್ಟ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ರೂಪಿಸಿದ್ದು, ಇವುಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಬೆಳಿಗ್ಗೆ ೧೧ ರಿಂದ ೧೨:೩೦ ರವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ವಸ್ತ್ರ ಸಂಹಿತೆ ನಿಯಮಗಳೇನು?
೧ - ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸತಕ್ಕದ್ದಲ್ಲ.
೨-ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸತಕ್ಕದ್ದಲ್ಲ.
೩-ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು(ಚಪ್ಪಲಿ) ಧರಿಸುವುದು.
೪-ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.