ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ಯಾರಾಲಿಂಪಿಕ್ಸ್​ 2024: ಕಂಚು ಗೆದ್ದ ಪ್ರೀತಿ ಪಾಲ್​

06:22 PM Aug 30, 2024 IST | Samyukta Karnataka

ಪ್ಯಾರಿಸ್ ಪ್ಯಾರಾಲಿಂಪಿಕ್ 2024ರ ಮಹಿಳೆಯರ 100 ಮೀಟರ್ ಟಿ35 ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್​ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.
ಪ್ರೀತಿ 14.21 ಸೆಕೆಂಡ್‌ಗಳಲ್ಲಿ 100 ಮೀಟರ್​ ಗುರಿಯನ್ನು ತಲುಪಿ ಪದಕ ವಶಪಡಿಸಿಕೊಂಡರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. ಇದರೊಂದಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಟ್ರ್ಯಾಕ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರಿಗೂ ಮೊದಲು ಭಾರತದ ಶೂಟರ್ ಅವನಿ ಲೇಖರ ಚರಿತ್ರೆ ಸೃಷ್ಟಿಸಿದ್ದಾರೆ. ಸತತ ಎರಡು ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಏಕೈಕ ಕ್ರೀಡಾಪಟು ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಇಂದು ನಡೆದ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅವನಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇದೇ ಸ್ಪರ್ಧೆಯಲ್ಲಿ ಭಾರತದ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದರು.

Tags :
#Paralympics2024
Next Article