For the best experience, open
https://m.samyuktakarnataka.in
on your mobile browser.

ಪ್ರಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ಇನ್ನಿಲ್ಲ

11:09 AM Feb 19, 2024 IST | Samyukta Karnataka
ಪ್ರಖ್ಯಾತ ಕಾದಂಬರಿಕಾರ ಕೆ ಟಿ ಗಟ್ಟಿ ಇನ್ನಿಲ್ಲ

ಮಂಗಳೂರು: ಕರ್ನಾಟಕ ಸಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನರಾಗಿದ್ದಾರೆ.
ಮೂಲತಹ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ ಇವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದರು. ಇಥಿಯೋಪಿಯದಿಂದ ಹಿಂತಿರುಗಿದ ನಂತರ ಅವರು ಉಜಿರೆಯಲ್ಲಿ ವಾಸವಾಗಿ ಕೃಷಿಯಲ್ಲಿ ತೊಡಗಿದ್ದರು.
ಕಾದಂಬರಿಗಳು: ಶಬ್ದಗಳು (೧೯೭೬), ಸೌಮ್ಯ (೧೯೭೮), ಮನೆ, ರಾಮಯಜ್ಞ, ನಿರಂತರ, ಅಬ್ರಾಹ್ಮಣ, ಅಮುಕ್ತ, ಅವಿಭಕ್ತರು, ಕರ್ಮಣ್ಯೇ ವಾಧಿಕಾರಸ್ತೇ, ಕೂಪ, ಪೂಜಾರಿ, ಬಿಸಿಲುಗುದುರೆ, ಮೃತ್ಯೋರ್ಮಾ ಅಮೃತಂ ಗಮಯ, ಯುಗಾಂತರ, ಶಿಲಾತಪಸ್ವಿ, ಸ್ವರ್ಣಮೃಗ, ಅರಗಿನ ಮನೆ.