ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳಲು ಸಿಎಂ ಮನವಿ
01:05 PM Sep 12, 2024 IST
|
Samyukta Karnataka
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
Next Article