ಪ್ರತಿಪಕ್ಷಗಳ ಸಂಸದರ ಅಮಾನತು ಹಿಂಪಡೆಯಲು ಮನವಿ
03:53 PM Jan 30, 2024 IST
|
Samyukta Karnataka
ಬೆಂಗಳೂರು: ಚಳಿಗಾಲದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಸಂಸದರ ಅಮಾನತು ರದ್ದುಗೊಳಿಸುವಂತೆ ಲೋಕಸಭೆ ಮತ್ತು ರಾಜ್ಯಸಭೆಯ ಅಧ್ಯಕ್ಷ ಅಧಿಕಾರಿಗಳಿಗೆ ಸರ್ಕಾರ ಮನವಿ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲ ಸದಸ್ಯರ ಅಮಾನತು ಹಿಂಪಡೆಯುವಂತೆ ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದಿದ್ದಾರೆ.
Next Article