For the best experience, open
https://m.samyuktakarnataka.in
on your mobile browser.

ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್

02:32 AM Feb 17, 2024 IST | Samyukta Karnataka
ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್

ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪನೆಗೆ ಸರ್ಕಾರ ನಿರ್ಧರಿಸಿದೆ.
೨೮೦ ಕೋಟಿ ರೂ. ವೆಚ್ಚದಲ್ಲಿ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು ನಿರ್ಮಿಸಲಿರುವ ಸರ್ಕಾರ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ ೭೫ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಿದೆ.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ೧೫೦ ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ, ಹಳ್ಳಿಗಾಡಿನ ೩೫೦ ಕೋಟಿ ರೂ.ಗಳಲ್ಲಿ ೨೫ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ, ಕಲ್ಯಾಣ ಕರ್ನಾಟಕದಲ್ಲಿ ೪೬ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ಪ್ರದೇಶಗಳಲ್ಲಿ ೬,೪೯೩ ಆರೋಗ್ಯ ಕ್ಷೇಮಗಳ ಸ್ಥಾಪನೆ, ಪ್ರತಿ ಜಿಲ್ಲೆಯಲ್ಲಿ ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆಗೆ ೨೦ ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮಾಮೋಗ್ರಫಿಯಂತ್ರ ಅಳವಡಿಕೆಗೆ ೨೧ ಕೋಟಿ ರೂ. ನೆರವು.ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೇಮಿ ಚಿಕಿತ್ಸೆ, ೧೩ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗೆ ಉಪಕರಣ ಖರೀದಿಗೆ ೬ ಕೋಟಿ ರೂ, ಬೆಂಗಳೂರಿನಲ್ಲಿ ೪೩೦ ಉಚಿತ ಪ್ರಯೋಗಾಲಯಗಳನ್ನು ಸ್ಥಾಪಿಸುವ ಭರವಸೆಯಿತ್ತಿರುವ ಸರ್ಕಾರ ಕೋವಿಡ್-೧೯ ಹಗರಣದ ನ್ಯಾಯಾಂಗ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳುವ ಬದ್ಧತೆ ಪ್ರದರ್ಶಿಸಿದೆ.