ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರತ್ಯೇಕ ರಾಜ್ಯವಾಗಿ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣ

11:43 AM Nov 28, 2023 IST | Samyukta Karnataka

ಪ್ರತ್ಯೇಕ ರಾಜ್ಯವಾಗಿ ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು ವಿಳಂಬವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಸಾಮಾಜಿಕ ಜಾಲತಾಣದಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಯ ಕುರಿತು ಸರಣಿ ಪೋಸ್ಟ್‌ ಮಾಡಿದ್ದಾರೆ. "ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರೂ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸೋಲಿನ ಭೀತಿಗೀಡಾಗಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ ನಡೆಸಿದ್ದಾರೆ. ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ದ ಕಾಂಗ್ರೆಸ್‌ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವೂ ಆಗಿದೆ. ಒಂಬತ್ತುವರೆ ವರ್ಷಗಳ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯ ಶೇಕಡಾ ಹತ್ತರಷ್ಟು ಭರವಸೆಗಳನ್ನೂ ಈಡೇರಿಸಿಲ್ಲ ಎನ್ನುವುದು ಅಲ್ಲಿನ ಮತದಾರರಿಗೆ ಅರಿವಾಗಿದೆ. ಇದರಿಂದ ಅಲ್ಲಿ ಪ್ರಧಾನಿ ನರೇಂದ್ರಮೋದಿಯವರ ಪ್ರಚಾರದಿಂದ ಆ ಪಕ್ಷಕ್ಕೆ ನಷ್ವವೇ ಹೊರತು ಲಾಭ ಇಲ್ಲ. ನುಡಿದಂತೆ ನಡೆದ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಬದ್ಧತೆಯಿಂದ ತೆಲಂಗಾಣದ ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಅಲ್ಲಿನ ಮತದಾರರು ನಂಬುವಂತಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷ ತೆಲಂಗಾಣದ ಮತದಾರರ ವಿಶ್ವಾಸಾರ್ಹತೆಯನ್ನು ಗಳಿಸಿದೆ. ನಮ್ಮ ನಾಯಕರಾದ ರಾಹುಲ್‌ ಗಾಂಧಿ ಮತ್ತು ಕರ್ನಾಟಕದವರೇ ಆಗಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತಮ್ಮ ಭಾಷಣಗಳಲ್ಲಿ ‘’ಕರ್ನಾಟಕ ಮಾದರಿ’’ ಆಡಳಿತವನ್ನು ಉಲ್ಲೇಖಿಸಿ ಮತದಾರರನ್ನು ಸೆಳೆಯತೊಡಗಿದ್ದಾರೆ. 2013-18 ರ ಅವಧಿಯ ನಮ್ಮ ಹಿಂದಿನ ಸರ್ಕಾರ ಮತ್ತು ಆರು ತಿಂಗಳ ಅವಧಿಯ ಈಗಿನ ಸರ್ಕಾರದ ಸಾಧನೆಗಳನ್ನು ಆ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮನೆಮನೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಮರೆತುಬಿಟ್ಟಿರುವ ಬಿಆರ್‌ಎಸ್ ಪಕ್ಷ ಮತ್ತು ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವ ಕೇಂದ್ರದ
ನರೇಂದ್ರ ಮೋದಿ ಸರ್ಕಾರದ ಎದುರಲ್ಲಿ ತೆಲಂಗಾಣದ ಮತದಾರರಿಗೆ ಕಾಂಗ್ರೆಸ್ ಪಕ್ಷ ಭರವಸೆಯ ಆಶಾಕಿರಣದಂತೆ ಕಾಣಿಸುತ್ತಿರುವ ಕಾರಣದಿಂದಾಗಿಯೇ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಎದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಮರುಸಾಬೀತಾಗಲಿದೆ. ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂಬ ದುರುದ್ದೇಶದಿಂದ ಬಿಜೆಪಿಯಲ್ಲಿರುವ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರಮೋದಿ ಮತ್ತು ಅಮಿತ್ ಶಾ ಜೋಡಿ ತುಳಿದುಹಾಕಿರುವುದರಿಂದ ಯಾವ ರಾಜ್ಯದಲ್ಲಿಯೂ ಜನತೆ ನಂಬಿಕೆ ಇಡಬಲ್ಲಂತಹ ಯಾವ ಸ್ಥಳೀಯ ನಾಯಕರು ಇಲ್ಲದಾಗಿದೆ. ಪ್ರತ್ಯೇಕ ರಾಜ್ಯವಾಗಿ ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು ವಿಳಂಬವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಆಶೋತ್ತರದ ಹೆಸರಲ್ಲಿ ಜನರನ್ನು ಮರುಳು ಮಾಡುತ್ತಾ ಬಂದಿರುವ ಬಿಆರ್ ಎಸ್ ಪಕ್ಷದ ನಾಟಕ ಅಲ್ಲಿನ ಮತದಾರರಿಗೆ ಅರಿವಾಗಿದೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಮಿತಿಮೀರಿದ ಭ್ರಷ್ಟಾಚಾರದಿಂದಾಗಿ ಬಿಆರ್‌ಎಸ್ ಪಕ್ಷ ಜನತೆಯ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದೆ. ಬಿಜೆಪಿ ಮತ್ತು ಬಿಆರ್‌ಎಸ್ ಎರಡೂ ಪಕ್ಷಗಳನ್ನು ಹಿಂದಕ್ಕಟ್ಟಿ ಮುಂದೋಡುತ್ತಿರುವ ಕಾಂಗ್ರೆಸ್ ಪಕ್ಷ ಅಚ್ಚರಿಯ ಗೆಲುವನ್ನು ದಾಖಲಿಸಲಿದೆ ಎಂಬ ವಿಶ್ವಾಸ ನನಗಿದೆ" ಎಂದು ಬರೆದುಕೊಂಡಿದ್ದಾರೆ.

Next Article