'ಪ್ರತ್ಯೇಕ ರಾಷ್ಟ್ರ' ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್
ನವದೆಹಲಿ: ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.
ಸಂಸತ್ತಿನ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಪ್ರಲ್ಹಾದ ಜೋಶಿ, ಕಾಂಗ್ರೆಸ್ ಸದಸ್ಯ ಸುರೇಶ್ ಅವರು ದಕ್ಷಿಣ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಟ್ಟಿದ್ದರು. ಈ ಹೇಳಿಕೆಯಿಂದ ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಕಾಂಗ್ರೆಸ್‌ಗೆ ಒತ್ತಾಯಿಸುತ್ತೇನೆ. ಕಾಂಗ್ರೆಸ್ ಇದನ್ನು ಮಾಡದಿದ್ದರೆ, ಅದು ಖಂಡಿತವಾಗಿಯೂ ಕಾಂಗ್ರೆಸ್ಸಿನ ನಿಲುವು ಎಂದು ಅರ್ಥ. ಇಡೀ ದೇಶವೇ ಒಂದು. ಭಾರತದ ಅಖಂಡತೆಯಲ್ಲಿ ನಮಗೆ ನಂಬಿಕೆಯಿದೆ ಎಂದಿದ್ದಾರೆ.
ಕಾಂಗ್ರೆಸ್ ಅಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ: ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ 'ದಕ್ಷಿಣ ರಾಜ್ಯಗಳಿಗೆ ಪ್ರತ್ಯೇಕ ರಾಷ್ಟ್ರ' ಹೇಳಿಕೆಯ ಗೊಂದಲವು ಲೋಕಸಭೆಯ ಕಲಾಪದಲ್ಲಿ ಶುಕ್ರವಾರ ಮುಂದುವರಿದಿದ್ದು, ಬಿಜೆಪಿ ನಾಯಕರು ಸುರೇಶ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿರುವಂತೆ ಕಾಂಗ್ರೆಸ್ ಅಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ಯಾರಾದರೂ ದೇಶವನ್ನು ಒಡೆಯುವ ಬಗ್ಗೆ ಮಾತನಾಡಿದರೆ, ಅವರು ಯಾವುದೇ ಪಕ್ಷಕ್ಕೆ ಸೇರಿದವರಾಗಿದ್ದರೂ ಅದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಂದಾಗಿದ್ದೇವೆ ಮತ್ತು ನಾವು ಒಂದಾಗಿರುತ್ತೇವೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಸಂಸತ್ತಿನಲ್ಲಿ ಹೇಳಿದರು.