ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಧಾನಿ ಮೋದಿಯವರಿಗೆ 370 ಸ್ಥಾನ ಗಿಫ್ಟ್ ನೀಡಿ

11:31 PM Feb 20, 2024 IST | Samyukta Karnataka

ಹುಬ್ಬಳ್ಳಿ : ಜಮ್ಮು ಮತ್ತು ಕಾಶ್ಮೀರದಲ್ಲಿ 370 ಕಲಂ ರದ್ದುಗೊಳಿಸಿದ ಬಳಿಕ ದೇಶದಲ್ಲಿ ಭಯೋತ್ಪಾದಕ ಕೃತ್ಯಗಳು ನಿಂತಿವೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ 370 ಸ್ಥಾನಗಳಲ್ಲಿ ಗೆಲ್ಲಿಸಿ ಗಿಫ್ಟ್ ನೀಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಮನವಿ ಮಾಡಿದರು.

ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಆಯೋಜಿಸಿದ್ಧ ಸಂಸದರ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಡಿ ಆಯೋಜಿಸಿದ್ಧ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಲಂ 370 ಜಾರಿಯಲ್ಲಿದ್ದಾಗ ದೆಹಲಿ, ಬೆಂಗಳೂರು, ಹೈದರಾಬಾದ್, ಮುಂಬೈ ಹೀಗೆ ನಾನಾ ಕಡೆಗಳಲ್ಲಿ ಭಯೋತ್ಪಾದಕರು ಕೃತ್ಯಗಳು ಹೆಚ್ಚಾಗಿದ್ದವು. ಬಾಂಬ್ ಬ್ಲಾಸ್ಟ್ ಆಗುತ್ತಿದ್ದವು. ಮೋದಿಯವರು ಕಲಂ 370 ರದ್ದುಪಡಿಸುವ ಮೂಲಕ ಭಯೋತ್ಪಾದಕರ ಕೃತ್ಯಗಳನ್ನು ಮಟ್ಟ ಹಾಕಿದ್ದಾರೆ. ಭಯೋತ್ಪಾದಕರು ಜಮ್ಮು ಕಾಶ್ಮೀರವಷ್ಟೇ ಅಲ್ಲ; ಪಾಕಿಸ್ತಾನದಲ್ಲಿದ್ದರೂ ನುಗ್ಗಿ ಹೊಡೆಯುವ ಸಾಮರ್ಥ್ಯ ತಂದು ಕೊಟ್ಟಿದ್ದಾರೆ. ಇದರಿಂದ ದೇಶದ ಜನ ನೆಮ್ಮದಿಯಿಂದ ಬದುಕುವಂತಾಗಿದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲಿಸಿ ಪ್ರಧಾನಿ ಮೋದಿಯವರಿಗೆ ಗಿಫ್ಟ್ ನೀಡಬೇಕು ಎಂದು ಹೇಳಿದರು.

ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ ಹಾಗೂ ಇತರರಿದ್ದರು.

Next Article