ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಧಾನಿ ಮೋದಿ ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ

03:38 PM Dec 21, 2023 IST | Samyukta Karnataka

ನವದೆಹಲಿ: ‘ಬಿಜೆಪಿ-ಕರ್ನಾಟಕ’ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು.
ರಾಷ್ಟ್ರ ಭಕ್ತಿ, ಸಂಘ ನಿಷ್ಠೆ, ಸಮರ್ಪಣೆ, ಶಿಸ್ತು, ಬದ್ಧತೆ, ಕ್ರಿಯಾಶೀಲತೆ, ಸಾಧಿಸುವ ಛಲದ ಗುರಿ ಇವೆಲ್ಲಕ್ಕೂ ಭಾರತದ ಇತಿಹಾಸದಲ್ಲಿ ಉದಾಹರಿಸಬಲ್ಲ ಏಕೈಕ ವ್ಯಕ್ತಿತ್ವ ಮಾನ್ಯ ಮೋದಿ ಜೀ ಅವರದು, ಅವರ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತ ಕಟ್ಟುವ ಮಹಾನ್ ಸಂಕಲ್ಪ ಪರಿಪೂರ್ಣವಾಗಿ ಈಡೇರಿದರೆ ವಿಶ್ವಮಟ್ಟದಲ್ಲಿ ನಮ್ಮಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ. ಈ ನಿಟ್ಟಿನಲ್ಲಿ ಅವರೊಂದಿಗೆ ಹೆಗಲು ಕೊಡುವ ಪುಣ್ಯದ ಕಾರ್ಯದಲ್ಲಿ ಸಮರ್ಪಿಸಿಕೊಳ್ಳಲು ‘ಬಿಜೆಪಿ-ಕರ್ನಾಟಕ’ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯ ಎಂಬುದು ನನ್ನ ವಿನಮ್ರ ಭಾವವಾಗಿದೆ. 2024 ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಜೀ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಬರೆದುಕೊಂಡಿದ್ದಾರೆ.

Next Article