ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರವಾಸ ಹೊರಟಿದ್ದ ಶಾಲಾ ಬಸ್ ಪಲ್ಟಿ: ಚಾಲಕ ಸಹಿತ ನಾಲ್ವರು ಗಂಭೀರ

11:00 AM Dec 26, 2023 IST | Samyukta Karnataka

ಹಾವೇರಿ: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ಹೊರಟಿದ್ದ ಬಸ್ ಪಲ್ಟಿಯಾದ ಘಟನೆ ಸವಣೂರು ತಾಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.
ರಾಯಚೂರಿನ ಶಾಲಾ ಪ್ರವಾಸಿ ಬಸ್​ ಪಲ್ಟಿಯಾಗಿದ್ದು ಮೂವರು ವಿದ್ಯಾರ್ಥಿಗಳು, ಬಸ್​ ಚಾಲಕ ಗಂಭೀರವಾಗಿ ಗಾಯಗೊಂಡು, 12 ಮಕ್ಕಳಿಗೆ ಸಣ್ಣಪುಟ್ಟ ಗಾಯವಾದ ಘಟನೆ ಹಾವೇರಿ ಬೆಳಗ್ಗೆ 6 ಗಂಟೆಗೆ ನಡೆದಿದೆ. ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಜ್ಜನಗುಡ್ಡದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸ ಕೈಗೊಂಡಿದ್ದರು. ಇಲ್ಲಿನ ಉತ್ಸವ ರಾಕ್​ಗಾರ್ಡ್​ಗೆ ತೆರಳುತ್ತಿದ್ದಾಗ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್​ ಬಳಿ ಎದುರಿಗೆ ಬಂದ ಕಾರನ್ನು ತಪ್ಪಿಸುವಾಗ ನಿಯಂತ್ರಣ ತಪ್ಪಿದ ಬಸ್​ ಉರುಳಿ ಬಿದ್ದಿದೆ. ಈ ವೇಳೆ ಬಸ್​​​​ನಲ್ಲಿ 53 ವಿದ್ಯಾರ್ಥಿಗಳು, 6 ಶಿಕ್ಷಕರು ಇದ್ದು, ಘಟನೆಯಲ್ಲಿ ಬಸ್​ ಚಾಲಕ ಮತ್ತು ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಕ್ಕಳಿಗೆ ಸ್ಥಳೀಯ ಶಾಲೆಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಸವಣೂರು ಉಪವಿಭಾಗಾಧಿಕಾರಿ, ತಹಶೀಲ್ದಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Next Article