ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ
ಬೆಂಗಳೂರು: ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ.
☠️ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ
☠️ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ
☠️ಕಲ್ಬುರ್ಗಿಯ ದಕ್ಷ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ
☠️ಅನ್ನಭಾಗ್ಯ ಹಗರಣದ ಸಾಕ್ಷ್ಯ ಸಂಗ್ರಹಿಸಿದ್ದ ಐ.ಎ.ಎಸ್ ಅಧಿಕಾರಿ ಅನುರಾಗ್ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು.
☠️ಹೂವಿನ ಹಡಗಲಿಯ ಡಿ.ವೈ.ಎಸ್.ಪಿ ಯಾಗಿದ್ದ ಅನುಪಮಾ ಶೆಣೈಗೆ ಕಿರುಕುಳ, ನೌಕರಿಗೆ ರಾಜೀನಾಮೆ
☠️ಮೈಸೂರಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಿಎಂ ಆಪ್ತರಿಂದ ಕಿರುಕುಳ
☠️ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ
ಮಹಾನಿರ್ದೇಶಕಿಯಾಗಿದ್ದ ರಶ್ಮಿಯವರ ಮೇಲೆ ಹಾಡುಹಗಲೇ ಮಾರಣಾಂತಿಕ ಹಲ್ಲೆ
☠️ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ
☠️ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ